Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಎಕ್ ವಿಶಯ್ ಮಿಯಾ ತುಜ್ಯಾ ವಿಶಯಾತ್ ಸಾಂಗ್ತಲೆ ಹಾಯ್. ಜೆಜೆಬೆಲ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತುಮಿ ಸೊಸುನ್ ಘೆವ್ನ್ ಹಾಸಿ. ತಿ ಅಪ್ನಾಕುಚ್ ದೆವಾಕ್ನಾ ಧಾಡುನ್ ದಿಲ್ಲಿ ಪ್ರವಾದಿನ್ ಮನುನ್ ಘೆತಾ. ಅಪ್ನಾಚ್ಯಾ ಶಿಕಾಪಾಂಚ್ಯಾ ವೈನಾ ತಿ ಮಾಜ್ಯಾ ಸೆವಕಾಕ್ನಿ ಆಂಗಾಚ್ಯಾ ಸಮಂದಾಚ್ಯಾ ವಿಶಯಾತ್ ಚುಕ್ ವಾಟೆಕ್ ನ್ಹೆತಾ ಅನಿ ಮುರ್ತಿಯಾಕ್ನಿ ಭೆಟ್ವಲ್ಲೆ ತೆನಿ ಖಾಯ್‍ ಸರ್ಕೆ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:20
19 ತಿಳಿವುಗಳ ಹೋಲಿಕೆ  

ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.


ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,


ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.


ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.


ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


“‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು