Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ಜಾರತ್ವವನ್ನು ಬಿಟ್ಟುಬಿಡುವದಕ್ಕೆ ಅವಳಿಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಿಯಾ ತಿಕಾ ತಿಚ್ಯಾ ಪಾಪಾನಿತ್ನಾ ಭಾಯ್ರ್ ಯೆವ್ಕ್ ಎಳ್ ದಿಲ್ಲೊ ಹಾಯ್, ಖರೆ ತಿಕಾ ತ್ಯಾ ಅನೈತಿಕ್ ಸಮಂದಾತ್ನಾ ಭಾಯ್ರ್ ಯೆವ್ಕ್ ಮನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:21
9 ತಿಳಿವುಗಳ ಹೋಲಿಕೆ  

ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.


ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು