Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಿಯಾ ತಿಚ್ಯಾ ವಾಂಗ್ಡಿಯಾಕ್ನಿ ಮಾರುನ್ ಟಾಕ್ತಾ ತನ್ನಾ ಸಗ್ಳ್ಯಾ ಲೊಕಾಕ್ನಿ ತಾಂಡ್ಯಾಕ್ನಿ ಕಳುನ್ ಯೆತಾ ಮಿಯಾ ತೆಂಚಿ ಮನಾ ಕಳ್ವುನ್ ಘೆತಾ ಅನಿ . ಮಿಯಾ ತುಮ್ಚ್ಯಾ ಕಾಮಾಂಚ್ಯಾ ಪರ್ಕಾರ್ ಮಜುರಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:23
39 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.


“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.


ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.


ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.


ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.


ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.


ಏಕೆಂದರೆ ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.


ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


“ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.


ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.


ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.


ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು