ಪ್ರಕಟನೆ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತಿಯಾ ಲೈ ಸೊಸುನ್ ಘೆವ್ನ್ ಹಾಸ್, ಮಾಕಾ ಲಾಗುನ್ ತಿಯಾ ಲೈ ಕಸ್ಟ್ ಕಾಡ್ಲೆಯ್. ಜಾಲ್ಯಾರ್‍ಬಿ ತಿಯಾ ಮಾಕಾ ಸೊಡುನ್ ಜಾವ್ಕನೆಯ್. ಅಧ್ಯಾಯವನ್ನು ನೋಡಿ |
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.