Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಒಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಆ ದೇವದೂತನು ತಳವಿಲ್ಲದ ಕೂಪದ ಬೀಗದ ಕೈಯನ್ನು ಹೊಂದಿದ್ದನು ಮತ್ತು ಒಂದು ದೊಡ್ಡ ಸರಪಣಿಯನ್ನೂ ತನ್ನ ಕೈಯಲ್ಲಿ ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಒಬ್ಬ ದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಸರ್‍ಗಾ ವೈನಾ ಎಕ್ ದೆವ್‍ದುತಾ ಖಾಲ್ತಿ ಯೆತಲೊ ಮಾಕಾ ದಿಸ್ಲೊ, ತೆನಿ ಅಪ್ನಾಚ್ಯಾ ಹಾತಾತ್ ಪಾತಾಳಾಚಿ ಚಾವಿ ಅನಿ ಎಕ್ ಘಟ್ಮುಟ್ಲಿ ಸರ್ಪೊಳಿ ಧರಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:1
8 ತಿಳಿವುಗಳ ಹೋಲಿಕೆ  

ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.


ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.


ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.


ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು