ಪ್ರಕಟನೆ 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹ್ಯಾ ಪಯ್ಲೆಚ್ಯಾ ಮರಲ್ಲೆ ಝಿತ್ತೆ ಹೊವ್ನ್ ಉಟ್ತಲ್ಯಾತ್ ಮಿಳಲ್ಲಿ ಲೊಕಾ ಕವ್ಡಿ ಪವಿತ್ರ್ ಅನಿ ಸುಖಿ, ದೊನ್ವೆಚ್ಯಾ ಮರ್‍ನಾಕ್ ಹ್ಯೆಂಚೆ ವರ್ತಿ ಅದಿಕಾರ್ ನಾ; ತೆನಿ ದೆವಾಚಿ ಅನಿ ಕ್ರಿಸ್ತಾಚಿ ಯಾಜಕಾ ಹೊತ್ಯಾತ್ ಅನಿ ತೆನಿ ತ್ಯೆಚ್ಯಾ ವಾಂಗ್ಡಾ ಎಕ್ ಹಜಾರ್ ವರ್ಸಾ ರಾಜ್ ಚಾಲ್ವುತ್ಯಾತ್. ಅಧ್ಯಾಯವನ್ನು ನೋಡಿ |