ಪ್ರಕಟನೆ 21:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಶಾರಾಕ್ ಉಜ್ವೊಡ್ ದಿವ್ಕ್ ದಿಸ್ ನಾಹೊಲ್ಯಾರ್ ಚಂದ್ರಾಮ್ ಪಾಜೆ ಮನುನ್ ನಾ, ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಮಹಿಮಾಚ್ ತ್ಯಾ ಶಾರಾ ವರ್ತಿ ಫಾಕಲ್ಲಿ ರ್‍ಹಾತಾ, ಅನಿ ಬೊಕ್ಡುಚ್ ತ್ಯಾ ಶಾರಾಚೊ ದಿವೊ. ಅಧ್ಯಾಯವನ್ನು ನೋಡಿ |