ಪ್ರಕಟನೆ 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅನಿ ತೆನಿ, “ತೆ ಪುರಾ ಹೊಲೆ! ಮಿಯಾಚ್ ಪಯ್ಲೆಚೊ ಅನಿ ಆಕ್ರಿಚೊ, ಮಿಯಾಚ್ ಆರಂಬ್ ಅನಿ ಅಂತ್. ಜೆ ಕೊನ್ ಸೊಸೆನ್ ಹಾಯ್ ತೆಕಾ ಮಿಯಾ ಜಿವ್ ದಿತಲ್ಯಾ ಪಾನಿಯಾಚ್ಯಾ ಝರ್‍ಯಾತ್ಲೆ ಪಾನಿ ಫಿತಲೊ ಹಕ್ಕ್ ಫುಕೊಟ್ ದಿತಾ. ಅಧ್ಯಾಯವನ್ನು ನೋಡಿ |