Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಭಿವ್‍ಕುರ್‍ಯಾಕ್ನಿ, ವಿಶ್ವಾಸಾನ್‍ ನಸಲ್ಲ್ಯಾಕ್ನಿ, ನಶ್ಟ್ಯಾಕ್ನಿ, ಜಿವ್ ಕಾಡ್ತಲ್ಯಾಕ್ನಿ, ವ್ಯೆಭಿಚಾರ್ ಕರ್ತಲ್ಯಾಕ್ನಿ, ಜಾದುವಾ ನಾಹೊಲ್ಯಾರ್ ಮುರ್ತಿ ಪುಜ್ಯಾ ಕರ್ತಲ್ಯಾಕ್ನಿ ಅನಿ ಝುಟೆ ಬೊಲ್ತಲ್ಯಾಕ್ನಿ ಸಗ್ಳ್ಯಾಕ್ನಿ ಗಾವ್ತಲೊ ಜಾಗೊ ಗಂಧಕಾಚಿ ಆಗ್ ಪೆಟ್ತಲೆ ನರ್ಕಾತ್. ಹೆಚ್ ದೊನ್ವೆಚೆ ಮರಾನ್”, ಮಟ್ಲ್ಯಾನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:8
39 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.


ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.


ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.


ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.


ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.


“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು