Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಶಾರಾಚ್ಯಾ ವೊನಿಯಾಂಚ್ಯಾ ಮದ್ದಿ ಹೊಂವ್‍ಲಾಗಲ್ಲೆ, ನ್ಹಯ್‍ಚ್ಯಾ ದೊನ್ ದಂಡೆಕ್ನಿ ಜಿವ್ ದಿತಲೆ ಝಾಡ್ ಹೊತ್ತೆ, ತೆ ವರ್ಸಾಚೆ ಬಾರಾ ಮ್ಹಯಿನೆಬಿ ಫಳಾ ದಿ, ತೆ ಮಹಿನ್ಯಾಕ್ ಎಕ್ ಪಿಕ್ಕ್ ದಿ, ಅನಿ ತ್ಯಾ ಝಾಡಾಚಿ ಪಾನಾ ದೆಶಾಕ್ನಿ ಗುನ್ ಕರುಕ್ ವಾಪ್ರುನ್ ಹೊಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:2
20 ತಿಳಿವುಗಳ ಹೋಲಿಕೆ  

ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.


ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.


ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು