ಪ್ರಕಟನೆ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ. ಅಧ್ಯಾಯವನ್ನು ನೋಡಿ |