Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ನಿನ್ನ ವಿಷಯದಲ್ಲಿ - ನಾನು ಐಶ್ವರ್ಯವಂತನು, ಸಂಪನ್ನನು, ಒಂದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬಟ್ಟೆಯಿಲ್ಲದವನು ಆಗಿರುವದನ್ನು ತಿಳಿಯದೆ ಇದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ನೀನು ನಿನ್ನ ವಿಷಯದಲ್ಲಿ, ‘ನಾನು ಐಶ್ವರ್ಯವಂತನು, ನಾನು ಸಂಪಾದಕನಾಗಿದ್ದೇನೆ ಮತ್ತು ಕೊರತೆ ನನಗಿಲ್ಲ,’ ಎಂದು ಹೇಳಿಕೊಳ್ಳುತ್ತಿ. ಆದರೆ ನೀನು ಕೇವಲ ದುರವಸ್ಥೆಯುಳ್ಳವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾದವನು ಎಂಬುದನ್ನು ತಿಳಿಯದೆ ಇದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿಯಾ ಮಿಯಾ ಸಾವ್ಕಾರ್, ಲೈ ಆಸ್ತಿ ಅಸಲ್ಲೊ; ಮಾಜ್ಯಾಕ್ಡೆ ಮಾಕಾ ಗರಜ್ ಹೊತ್ತೆ ಸಗ್ಳೆ ಹಾಯ್ ಮನ್ತೆಯ್. ಖರೆ ತುಜಿ ಗತ್ ಕಾಯ್, ತಿಯಾ ಕಸ್ಲ್ಯಾ ಪರಿಸ್ತಿತಿತ್ ಪಡ್ಲೆ ಮನುನ್ ತುಕಾ ಗೊತ್ತ್ ನಾ. ತಿಯಾ ಗರಿಬ್, ನಾಗ್ಡೊ ಅನಿ ಕುಡ್ಡೊ ಹೊವ್ನ್ ಹಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:17
26 ತಿಳಿವುಗಳ ಹೋಲಿಕೆ  

ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.


ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?


ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.


“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.


ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.


ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.


“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.


ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.”


ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.


ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?


ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.


ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು