Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಆಯ್ಕ್! ಮಿಯಾ ದಾರಾರ್ ಇಬೆ ರ್‍ಹಾವ್ನ್ ದಾರ್ ಬಡ್ವುತಾ, ಜೆ ಕೊನ್ ಮಾಜೊ ಧನ್ ಆಯಿಕ್ತಾ ಅನಿ ದಾರ್ ಉಗಡ್ತಾ, ತೆಂಚ್ಯಾ ಘರಾತ್ನಿ ಮಿಯಾ ಭುತ್ತುರ್ ಗುಸ್ತಾ ಅನಿ ತೆಂಚ್ಯಾ ವಾಂಗ್ಡಾ ಜೆವಾನ್ ಕರ್ತಾ, ಅನಿ ತೆನಿಬಿ ಮಾಜ್ಯಾ ವಾಂಗ್ಡಾ ಜೆವಾನ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:20
8 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.


ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.


ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.


ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.


ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು