Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಕೆಲವು ಜನರು ಸಾರ್ದಿಸಿ ಪಟ್ಟಣದಲ್ಲಿ ಇದ್ದಾರೆ, ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಸಾರ್ದಿಸಾತ್ ತುಮ್ಚ್ಯಾ ಮದ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ನಾಚೆ ಕಪ್ಡೆ ಮ್ಹೆಳ್ವಿ ನಸ್ತಾನಾ ಥವ್ನ್ ಘೆಟ್ಲ್ಯಾನಾತ್. ತುಮಿ ಫಾಂಡ್ರೆ ಕಪ್ಡೆ ನೆಸುನ್ ಮಾಜ್ಯಾ ವಾಂಗ್ಡಾ ಚಲ್ತ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಹೆಕಾ ಯೊಗ್ಯ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:4
31 ತಿಳಿವುಗಳ ಹೋಲಿಕೆ  

ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.


ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.


ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.


ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.


ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.


ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.


ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.


ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.


ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು