Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತ್ಯಾ ಮದ್ಲ್ಯಾ ಸಿವಾಸನಾಕ್ನಾ ಮಿಂಚ್ ಮಾರಿ, ಅನಿ ದುಸ್ರೊ , ದುಸ್ರೊ ಅವಾಜ್ ಯೆಯ್ ಮೊಟೊ ಗುಡ್ಗುಡೊ ಭಾಯ್ರ್ ಯೆಯ್. ಸಿವಾಸನಾಚ್ಯಾ ಇದ್ರಾಕ್ ಸಾತ್ ದಿವೆ ಪೆಟಲ್ಲೆ ಹೊತ್ತೆ. ತೆ ದಿವೆ ದೆವಾಚೆ ಸಾತ್ ಆತ್ಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:5
24 ತಿಳಿವುಗಳ ಹೋಲಿಕೆ  

ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ.


“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.


ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.


ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು,


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.


ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.


ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.


ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.


“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.


ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು