ಪ್ರಕಟನೆ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಳಬೇಡ; ಅಗೋ, ಯೂದಾ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಜಯಹೊಂದಿದನು; ಆತನು ಆ ಸುರುಳಿಯನ್ನೂ ಅದರ ಏಳು ಮುದ್ರೆಗಳನ್ನೂ ಬಿಚ್ಚುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ಜಾನ್ತ್ಯಾನಿತ್ಲ್ಯಾ ಎಕ್ಲ್ಯಾನ್ ಮಾಕಾ, “ರಡುನಕೊ, ಬಗ್! ಜುದಾಸಾಚ್ಯಾ ಕುಳಿತ್ಲೊ ಸಿವ್, ದಾವಿದಾಚ್ಯಾ ಘರಾನ್ಯಾತ್ಲೊ ಮೊಟೊ ಮಾನುಸ್, ತೊ ಜಿಕುನ್ ಜಯ್ ಹೊಲ್ಲೊ ಹಾಯ್, ಅನಿ ತೊ ತೆ ಸಾತ್ ಛಪ್ಪೆ ಫೊಡುನ್ ತಿ ಸುಳ್ಳಿ ಉಗಡ್ತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.