Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ, ಸುಳ್ಳಿ ಘೆವ್ನ್ ಛಪ್ಪೆ ಫೊಡುನ್ ತಿ ಉಗ್ಡುಕ್ ತಿಯಾಚ್ ಯೊಗ್ಯ್. ತುಕಾ ಅದ್ದಿ ಜಿವಾನಿ ಮಾರುನ್ ಹೊಲ್ಲೆ, ಅನಿ ತಿಯಾ ಬಲಿ ಹೊವ್ನ್ ಮರಲ್ಲ್ಯಾ ವೈನಾ. ತಿಯಾ ಹರಿಎಕ್ ಕುಳ್, ಬಾಶಾ, ದೆಶಾ, ಅನಿ ಜಾತಿಯಾನಿತ್ನಾ ಲೊಕಾಕ್ನಿ ದೆವಾಸಾಟಿ ಇಕಾತ್ ಘೆಟ್ಲೆಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:9
41 ತಿಳಿವುಗಳ ಹೋಲಿಕೆ  

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.


ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.


ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.


ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.


ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ.


ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.


ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.


ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.


ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.


ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.


ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.


ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು