Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿ,“ಸಗ್ಳ್ಯಾಚ್ಯಾನ್ಕಿ ಮೊಟ್ಯಾ ದೆವಾ, ತಿಯಾ ಪವಿತ್ರ್ ಅನಿ ಖರೊ! ಅಮ್ಕಾ ಜಿವಾನಿ ಮಾರಲ್ಲ್ಯಾ ಹ್ಯಾ ಲೊಕಾಂಚಿ ನ್ಯಾಯ್‍ ನಿರ್‍ನಯ್ ನಿತ್ ಕರಿನಸ್ತಾನಾ ಅನಿ ತೆಂಕಾ ಶಿಕ್ಷಾ ದಿ ನಸ್ತಾನಾ ಅನಿ ಕವ್ಡೆ ಪತರ್ ರ್‍ಹಾತೆಯ್?” ಮನುನ್ ಮೊಟ್ಯಾನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:10
33 ತಿಳಿವುಗಳ ಹೋಲಿಕೆ  

ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.


ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


“ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.


ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.


ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಆತನೇ ನನಗೋಸ್ಕರ ನಿನಗೆ ಮುಯ್ಯಿ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.


ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?


ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,


ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.


ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ?


“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.


ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.


ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು