Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಲ್ಲಿ ಒಬ್ಬೊಬ್ಬನಿಗೆ ಒಂದೊಂದು ಬಿಳಿ ನಿಲುವಂಗಿಯು ಕೊಡಲ್ಪಟ್ಟಿತು. ಇದಲ್ಲದೆ - ನಿಮ್ಮ ಹಾಗೆ ಕೊಲೆಯಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆದಾಸರ ಸಂಖ್ಯೆಯೂ ಪೂರ್ಣವಾಗುವ ತನಕ ಇನ್ನೂ ಸ್ವಲ್ಪ ಕಾಲ ವಿಶ್ರವಿುಸಿಕೊಂಡಿರಬೇಕೆಂದು ಅವರಿಗೆ ಉತ್ತರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಆತ್ಮಗಳಲ್ಲಿ ಪ್ರತಿಯೊಂದಕ್ಕೂ ಒಂದೊಂದು ಬಿಳಿ ನಿಲುವಂಗಿಯನ್ನು ಕೊಡಲಾಯಿತು. ಇನ್ನೂ ಸ್ವಲ್ಪಕಾಲ ಕಾಯುವಂತೆ ಅವುಗಳಿಗೆ ತಿಳಿಸಲಾಯಿತು. ಅವರ ಸಹೋದರರಲ್ಲಿ ಕೆಲವರು ಇನ್ನೂ ಕ್ರಿಸ್ತನ ಸೇವೆಯಲ್ಲಿದ್ದಾರೆ. ಅವರೂ ಕೊಲ್ಲಲ್ಪಡಬೇಕು. ಈ ಕೊಲೆಗಳೆಲ್ಲಾ ಮುಗಿಯುವ ತನಕ ಕಾಯಬೇಕೆಂದು ಆ ಆತ್ಮಗಳಿಗೆ ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆಂಕಾ ಹರಿಎಕ್ಲ್ಯಾಕ್ನಿ ಎಕೆಕ್ ಫಾಂಡ್ರೊ ಝಗೊ ದಿಲ್ಲೊ ಹೊತ್ತೊ, ಅನಿ ತುಮ್ಚ್ಯಾ ಸಾರ್ಕೆ ಸಗ್ಳ್ಯಾ ಸೆವಕಾಕ್ನಿ ಅನಿ ವಿಶ್ವಾಸಾನ್ ಅಸಲ್ಲ್ಯಾ ಭಾವ್ ಭೆನಿಯಾಕ್ನಿ ಜಿವಾನಿ ಮಾರುನ್ ಸರಿ ಪತರ್ ತುಮಿ ಹಿತ್ತೆ ಆರಾಮ್ ಘೆವಾ ಮನುನ್ ತೆಂಕಾ ಸಾಂಗಟಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:11
19 ತಿಳಿವುಗಳ ಹೋಲಿಕೆ  

ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.


ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.


ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು