ಪ್ರಕಟನೆ 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಕೆಂಪು ಕುದುರೆ ಒಂದು ಹೊರಟುಬಂದಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ವಿಶ್ವದಲ್ಲಿ ಶಾಂತಿಯನ್ನು ಅಳಿಸಿಹಾಕಿ ಲೋಕದ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡುವ ಅಧಿಕಾರವನ್ನು ಅವನಿಗೆ ಕೊಡಲಾಗಿತ್ತು. ಇದಲ್ಲದೆ, ಅವನಿಗೆ ದೊಡ್ಡ ಖಡ್ಗವನ್ನೂ ಸಹ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಮತ್ತೊಂದು ಕುದುರೆಯು ಹೊರಟು ಬಂತು; ಅದು ಕೆಂಪು ಕುದುರೆ. ಅದರ ಮೇಲೆ ಕೂತಿದ್ದವನಿಗೆ ಭೂವಿುಯಿಂದ ಸಮಾಧಾನವನ್ನು ತೆಗೆದುಬಿಡುವದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗುವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಅವನಿಗೆ ದೊಡ್ಡ ಕತ್ತಿಯು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಮತ್ತೊಂದು ಕುದುರೆಯು ಹೊರಗೆ ಬಂದಿತು. ಇದು ಕೆಂಪು ಕುದುರೆಯಾಗಿತ್ತು. ಈ ಕುದುರೆಯ ಮೇಲೆ ಕುಳಿತಿದ್ದ ಸವಾರನಿಗೆ ಲೋಕದಲ್ಲಿದ್ದ ಶಾಂತಿಯನ್ನು ತೆಗೆದುಹಾಕಲೂ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡಲೂ ಅವನಿಗೆ ಅಧಿಕಾರವನ್ನು ನೀಡಲಾಗಿತ್ತು. ಈ ಸವಾರನಿಗೆ ಒಂದು ಮಹಾಖಡ್ಗವನ್ನೂ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಕೆಂಪು ಬಣ್ಣದ ಬೇರೊಂದು ಕುದುರೆಯು ಹೊರಟು ಬಂದಿತು. ಅದರ ಸವಾರನಿಗೆ ಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವುದಕ್ಕೂ ಅಧಿಕಾರವು ಕೊಡಲಾಗಿತ್ತು. ಅವನಿಗೆ ದೊಡ್ಡ ಕತ್ತಿಯು ಸಹ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಅನಿ ಎಕ್ ಘೊಡ್ಕೆ ಭಾಯ್ರ್ ಯೆಲೆ ತೆಚೊ ರಂಗ್ ತಾಂಬ್ಡೊ ಹೊತ್ತೊ. ಹೆಚೆ ವರ್ತಿ ಸವಾರಿ ಕರ್ತಲ್ಯಾಕ್ ಜಿಮ್ನಿ ವರ್ತಿ ಝಗ್ಡೊ ಉಟ್ವುತಲೊ ಅಧಿಕಾರ್ ದಿಲ್ಲೊ ಹಾಯ್. ಹೆಚ್ಯಾ ವೈನಾ ಲೊಕಾ ಎಕಾಮೆಕಾಕ್ ಜಿವಾನಿ ಮಾರುನ್ ಘೆತಾತ್ ತೆಕಾ ಎಕ್ ಮೊಟಿ ತಲ್ವಾರ್ ದಿಲ್ಲಿ ಹಾಯ್. ಅಧ್ಯಾಯವನ್ನು ನೋಡಿ |