ಪ್ರಕಟನೆ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾಲ್ಕು ಜೀವಿಗಳ ಮಧ್ಯದಿಂದ ಹೊರಟಿತೋ ಎಂಬಂತೆ ಒಂದು ಧ್ವನಿ ನನಗೆ ಕೇಳಿಸಿತು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋದಿ; ದಿನದ ಕೂಲಿಗೆ ಮೂರು ಕಿಲೋಗ್ರಾಂ ಜವೆಗೋದಿ; ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಒಬ್ಬನ ಸ್ವರವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಆ ನಾಲ್ಕು ಜೀವಿಗಳಿದ್ದ ಸ್ಥಳದಿಂದ ಈ ಧ್ವನಿಯು ಹೊರ ಹೊಮ್ಮಿತು. ಆ ಧ್ವನಿಯು, “ಒಂದು ದಿನದ ಕೆಲಸಕ್ಕೆ ಒಂದು ಕಿಲೋಗ್ರಾಂ ಗೋಧಿ. ಒಂದು ದಿನದ ಕೆಲಸಕ್ಕೆ ಮೂರು ಕಿಲೋಗ್ರಾಂ ಬಾರ್ಲಿ. ಆದರೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡಿ!” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ನಾನು ನಾಲ್ಕು ಜೀವಿಗಳ ಮಧ್ಯದಿಂದ ಬಂದಂತೆ ಒಂದು ಧ್ವನಿಯನ್ನು ಕೇಳಿದೆನು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋಧಿ, ಮೂರು ಕಿಲೋಗ್ರಾಂ ಜವೆಗೋಧಿ, ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಚಾರ್ ಸಾವ್ಜಾನಿತ್ನಾ ಎಕ್ ಧನ್ ಯೆತಲೊ ಮಿಯಾ ಆಯಿಕ್ಲೊ. ತೊ ಧನ್, “ಎಕ್ ದಿಸಾಚಿ ಮಜುರಿ ಎಕ್ ಶೆರ್ ಘವ್, ಅನಿ ಎಕ್ ದಿಸಾಚಿ ಮಜುರಿ ತಿನ್ ಶೆರ್ ಬಾರ್‍ಲಿ. ಖರೆ ತೆಲ್ ಅನಿ ವಾಯ್ನ್ ಹಾಳ್ ಕರುನಕಾಶಿ!” ಮನುಲಾಗಲ್ಲೊ. ಅಧ್ಯಾಯವನ್ನು ನೋಡಿ |