Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಹಿರ್ವ್ಯಾ ಸರ್ಕ್ಯಾ ಬನ್ನಾಚೆ ಎಕ್ ಘೊಡ್ಕೆ ಮಾಕಾ ದಿಸ್ಲೆ. ಹೆಚ್ಯಾ ವರ್ತಿ ಸವಾರಿ ಕರ್ತಲ್ಯಾಕ್ ಮರಾನ್ ಮನುನ್ ನಾಂವ್ ದಿಲ್ಲೆ ಹೊತ್ತೆ, ಅನಿ ಪಾತಾಳ್ಬಿ ತ್ಯೆಚ್ಯಾ ಫಾಟ್ನಾಚ್ ಹೊತ್ತೆ. ಹ್ಯಾ ಜಿಮ್ನಿ ವೈಲೊ ರುಪೈತ್ಲೊ ಚಾರ್ ಆನೆ ಭಾಗ್ ಮಾರಾಮಾರಿಯಾನಿ, ಬರ್‍ಗಾಲಾನಿ, ರೊಗಾನಿ, ಅನಿ ಡಂಗ್ಳಿತ್ಲ್ಯಾ ಜನಾವರಾಂಚ್ಯಾ ಕಾರನಾನಿ ಜಿವಾನಿ ಮಾರುನ್ ಟಾಕುಕ್ ಮನುನ್ ಹೆಚ್ಯಾ ತಾಬೆತ್ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:8
26 ತಿಳಿವುಗಳ ಹೋಲಿಕೆ  

ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ಮೂರನೆಯ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೆಯ ರಥಕ್ಕೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.


“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”


ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.


ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.


ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.


ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.


ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.


“ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.


ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು