Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಚೆಸಾಟ್ನಿ ತೆನಿ ದಿಸ್ ರಾತ್ ದೆವಾಚ್ಯಾ ಸಿವಾಸನಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ತ್ಯೆಚ್ಯಾ ಗುಡಿತ್ ತೆಚೆ ಆರಾದನ್ ಕರ್‍ತ್ಯಾತ್. ಸಿವಾಸನಾ ವರ್ತಿ ಬಸಲ್ಲೊ ಅಪ್ನಿ ತೆಂಚ್ಯಾ ಮದ್ದಿ ಹಾಜರ್ ಹೊಲ್ಲ್ಯಾ ವೈನಾ ತೆಂಚಿ ರಾಕನ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:15
25 ತಿಳಿವುಗಳ ಹೋಲಿಕೆ  

ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,


ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು” ಎಂದು ಹೇಳಿದನು.


ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,


ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.


ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು