Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡುಕೊಂಡು ಮೂಡಣ ದಿಕ್ಕಿನಿಂದ ಏರಿಬರುವದನ್ನು ಕಂಡೆನು. ಅವನು ಭೂವಿುಯನ್ನೂ ಸಮುದ್ರವನ್ನೂ ಕೆಡಿಸುವದಕ್ಕೆ ಅಧಿಕಾರಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಅನಿಎಕ್ ದೆವಾಚ್ಯಾ ದುತಾನ್ ಝಿತ್ತ್ಯಾ ದೆವಾಚೊ ಛಪ್ಪೊ ಘೆವ್ನ್ ಯೆತಲೆ ಮಿಯಾ ಬಗಟ್ಲೊ. ತೆನಿ ಮೊಟ್ಯಾನ್, ತ್ಯಾ ದೆವಾನ್ ಜಿಮಿನ್ ಅನಿ ಸಮುಂದರಾಕ್ ವಾಯ್ಟ್ ಕರ್ತಲೊ ಅದಿಕಾರ್ ದಿಲ್ಲ್ಯಾ ಚಾರ್ ದೆವ್‍ದುತಾಕ್ನಿ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:2
29 ತಿಳಿವುಗಳ ಹೋಲಿಕೆ  

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.


ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.


ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.


ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.


ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.


ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.


ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.


ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು