Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾಚ್ಯಾ ದುತಾನ್,“ಅಮಿ ಅಮ್ಚ್ಯಾ ದೆವಾಚ್ಯಾ ಸೆವಕಾಕ್ನಿ ಕಪಾಳಾ ವರ್ತಿ ಛಪ್ಪೊ ಮಾರುನ್ ವಳಕ್ ಕರಿ ಪತರ್ ಜಿಮ್ನಿಕ್ ಹೊಂವ್ದಿತ್, ಸಮುಂದರಾಕ್ ಹೊಂವ್ದಿತ್, ಝಾಡಾಕ್ನಿ ಹೊಂವ್ದಿತ್ ಕಾಯ್ಬಿ ವಾಯ್ಟ್ ಕರುನಕಾಶಿ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:3
31 ತಿಳಿವುಗಳ ಹೋಲಿಕೆ  

ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.


ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.


ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.


ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.


ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.


ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,


ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.


ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು