Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಸೊನ್ಯಾಚೆ ಧುಪ್ ಜಾಳ್ವುತಲೆ ಆಯ್ದಾನ್ ಧರಲ್ಲೊ ಅನಿಎಕ್ ದೆವಾಚೊ ದುತ್ ಯೆಲೊ ಅನಿ ಆಲ್ತಾರಿಕ್ಡೆ ಇಬೆ ರ್‍ಹಾಲೊ. ಸಿವಾಸನಾಚ್ಯಾ ಇದ್ರಾಕ್ ಹೊತ್ತ್ಯಾ ಸೊನ್ಯಾಚ್ಯಾ ಆಲ್ತಾರಿ ವರ್ತಿ ದೆವಾಚಿ ಸಗ್ಳಿ ಲೊಕಾ ಮಾಗ್ನಿಯಾಂಚ್ಯಾ ವಾಂಗ್ಡಾ ಭೆಟ್ವುಸಾಟ್ನಿ ಮನುನ್ ಲೈ ದುಪ್ ತೆಚೆಕ್ಡೆ ದಿಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:3
32 ತಿಳಿವುಗಳ ಹೋಲಿಕೆ  

ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.


ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,


ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.


ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ


ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,


ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.


ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.


ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,


ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.


ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.


ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು