ಪ್ರಕಟನೆ 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮೊದಲನೆಯ ದೇವದೂತನು ತುತೂರಿಯನ್ನೂದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂವಿುಗೆ ಸುರಿಸಲ್ಪಟ್ಟವು; ಭೂವಿುಯೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಪಯ್ಲೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್ ತನ್ನಾ ಆಗ್ ಅನಿ ರಗಾತ್ ಮಿಸಳ್ ಹೊಲ್ಲೊ ಘಾರ್‍ಬಿಯಾಂಚೊ ಪಾವ್ಸ್ ಜಿಮ್ನಿ ವರ್ತಿ ಗಳುಕ್ ಲಾಗ್ಲೊ. ಜಿಮ್ನಿಚೊ ತಿನಾತ್ಲೊ ಎಕ್ ಭಾಗ್ ಜಳುನ್ ಗೆಲೊ. ಝಾಡಾನಿತ್ಲೊ ತಿನಾತ್ಲೊ ಎಕ್ ಭಾಗ್, ಅನಿ ಹಿರ್ವ್ಯಾ ಗವ್ತಾಚ್ಯಾ ಹರಿಎಕ್ ಪಾಲ್ವಿಯಾ ಝಳುನ್ ಗೆಲ್ಯಾ. ಅಧ್ಯಾಯವನ್ನು ನೋಡಿ |