Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎರಡನೆಯ ದೇವದೂತನು ತುತೂರಿಯನ್ನು ಊದಿದನು. ಬೆಂಕಿ ಹತ್ತಿ ಉರಿಯುತ್ತಿರುವ ಪರ್ವತವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರಕ್ಕೆ ಎಸೆಯಲಾಯಿತು. ಸಮುದ್ರದಲ್ಲಿ ಮೂರನೆಯ ಒಂದು ಭಾಗ ರಕ್ತವಾಗಿ ಮಾರ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎರಡನೆಯ ದೇವದೂತನು ತುತೂರಿಯನ್ನೂದಿದಾಗ ಬೆಂಕಿಹತ್ತಿ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿರುವ ಒಂದು ವಸ್ತು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿದ್ದ ದೊಡ್ಡ ಬೆಟ್ಟವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರದೊಳಕ್ಕೆ ಎಸೆಯಲಾಯಿತು. ಆಗ ಸಮುದ್ರದ ಮೂರನೆಯ ಒಂದು ಭಾಗ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಉರಿಯುತ್ತಿರುವ ದೊಡ್ಡ ಬೆಟ್ಟದಂಥದ್ದು ಸಮುದ್ರದಲ್ಲಿ ಎಸೆಯಲಾಯಿತು. ಸಮುದ್ರದ ಮೂರರಲ್ಲಿ ಒಂದು ಭಾಗವು ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನಾ ದೊನ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ಆಗಿಚ್ಯಾ ಮೊಟ್ಯಾ ಮಡ್ಡಿ ಸರ್ಕೆ ಕಾಯ್ಕಿ ಸಮುಂದರಾತ್ ಟಾಕುನ್ ಹೊಲೆ. ಸಮುಂದರಾಚೊ ತಿನಾತ್ಲೊ ಎಕ್ ಭಾಗ್ ರಗಾತ್ ಹೊವ್ನ್ ಬದಲ್ಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:8
13 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.


ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.


ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.


ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.


“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


“ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.


ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು