ಪ್ರಕಟನೆ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವದಕ್ಕಾಗಿ ಅದೇ ವರುಷ ಅದೇ ತಿಂಗಳು ದಿನ ತಾಸಿಗೆ ಸಿದ್ಧವಾಗಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಟ್ಟರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತ್ಯಾ ಚಾರ್ ದೆವಾಚ್ಯಾ ದುತಾಕ್ನಿ ಸೊಡುನ್ ಹೊಲೆ; ಅಸೆ ತ್ಯಾ ದೆವಾಚ್ಯಾ ದುತಾಕ್ನಿ ಹ್ಯಾಚ್ ಎಳಾರ್ ಹೊಂವ್ದಿ, ಆಜುಚ್ ಹೊಂವ್ದಿ, ಹ್ಯಾಚ್ ಮ್ಹಯಿನ್ಯಾತ್ ಹೊಂವ್ದಿ, ಹ್ಯಾಚ್ ವರ್ಸಾತ್ ಹೊಂವ್ದಿ ಮಾನ್ಸಾನಿತ್ಲೊ ತಿನಾತ್ಲೊ ಎಕ್ ಭಾಗ್ ಜಿವಾನಿ ಮಾರುಕ್ ಮನುನ್ ತಯಾರ್ ಕರುನ್ ಥವಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |