Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಕುದುರೆಗಳನ್ನೂ ಅವುಗಳ ಮೇಲೆ ಕುಳಿತ ಸವಾರರನ್ನೂ ನಾನು ದರ್ಶನದಲ್ಲಿ ಕಂಡೆ. ಆ ಸವಾರರು ಬೆಂಕಿಯ, ನೀಲಮಣಿಯ ಹಾಗೂ ಗಂಧಕ ವರ್ಣಗಳ ಕವಚಗಳನ್ನು ಧರಿಸಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಇದ್ದವು. ಅವುಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಂದರೆ - ಸವಾರರ ಕವಚಗಳ ಬಣ್ಣವು ಬೆಂಕಿ ಹೊಗೆ ಗಂಧಕ ಇವುಗಳ ಬಣ್ಣದ ಹಾಗಿತ್ತು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಮಿಯಾ ಮಾಜ್ಯಾ ದರ್ಶನಾತ್ ಘೊಡ್ಕಿ ಅನಿ ತೆಂಚ್ಯಾ ವೈನಿ ಸವಾರಿ ಕರ್ತಲ್ಯಾಕ್ನಿ ಬಗಟ್ಲೊ: ತೆಂಚ್ಯಾ ಹಿರ್‍ದ್ಯಾಂಚಿ ಕವಚಾ ಆಗಿ ಸರ್ಕಿ ತಾಂಬ್ಡಿ, ಅನಿ ಎಕ್ ನಮುನಿ ನಿಳ್ಯಾ ಸರ್ಕ್ಯಾ ರಂಗಾಚಿ, ಅನಿ ಎಕ್ ನಮನಿಚ್ಯಾ ನಿಳ್ಯಾ ಬನ್ನಾಚೊ ಪೊಡೊ ಸರ್ಕಿ ಹಳ್ದುಳಿ ಹೊತ್ತಿ. ಘೊಡ್ಕ್ಯಾಂಚಿ ತೊಂಡಾ ಸಿವಾಂಚ್ಯಾ ತೊಂಡಾಂಚ್ಯಾ ಸರ್ಕಿ ಹೊತ್ತಿ, ಅನಿ ತೆಂಚ್ಯಾ ತೊಂಡಾನಿತ್ನಾ ಆಗ್, ಡುಕೊಟ್, ಅನಿ ಗಂಧಕ್ ಭಾಯ್ರ್ ಯೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:17
16 ತಿಳಿವುಗಳ ಹೋಲಿಕೆ  

ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.


ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.


ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.


ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ,


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು