ಪ್ರಕಟನೆ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
20 ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.
20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
20 ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
20 ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.
ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.
ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.
ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.
ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.
ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು. “ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು.
ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.