Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಹೊಗೆಯೊಳಗಿಂದ ಮಿಡತೆಗಳು ಹೊರಟು ಭೂಮಿಗೆ ಬಂದವು. ಭೂಮಿಯಲ್ಲಿ ಇರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೊಗೆಯೊಳಗಿಂದ ವಿುಡಿತೆಗಳು ಭೂವಿುಯ ಮೇಲೆ ಹೊರಟುಬಂದವು. ಭೂವಿುಯಲ್ಲಿರುವ ಚೇಳುಗಳಿಗೆ ಸಾಮರ್ಥ್ಯವಿರುವ ಪ್ರಕಾರ ಅವುಗಳಿಗೆ ಸಾಮರ್ಥ್ಯ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಂತರ ಮಿಡತೆಗಳು ಹೊಗೆಯೊಳಗಿಂದ ಭೂಮಿಯ ಮೇಲಕ್ಕೆ ಬಂದಿಳಿದವು. ಅವುಗಳಿಗೆ ಚೇಳುಗಳಂತೆ ಕುಟುಕುವ ಶಕ್ತಿಯನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಬಂದವು. ಅವುಗಳಿಗೆ ಭೂಮಿಯ ಮೇಲಿನ ಚೇಳುಗಳಿಗೆ ಇರುವಂತೆ ಶಕ್ತಿಯನ್ನು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತ್ಯಾ ಡುಕ್ಟಾತ್ನಾ ಠೊಳಾ ಭಾಯ್ರ್ ಜಿಮ್ನಿ ವರ್ತಿ ಯೆಲಿ, ಅನಿ ತೆಂಕಾ ಇಂಚ್ವಾಕ್ನಿ ಹೊತ್ತಿಚ್ ತಾಕತ್ ದಿಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:3
16 ತಿಳಿವುಗಳ ಹೋಲಿಕೆ  

ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು.


ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.


ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.


ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.


ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ.


ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು, ಮಿಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ಮಿಡತೆಗಳಷ್ಟು ಅಸಂಖ್ಯಾತವಾಗಲಿ, ಗುಂಪುಮಿಡತೆಗಳಷ್ಟು ಅಪರಿಮಿತವಾಗಲಿ,


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.


ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.


ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು