Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಮಿಡತೆಗಳು ನೋಡುವುದಕ್ಕೆ ಸಮರಕ್ಕೆ ಸನ್ನದ್ಧರಾಗಿರುವ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟವಿದ್ದಂತೆ ಕಾಣಿಸುತ್ತಿತ್ತು. ಮುಖಗಳು ಮನುಷ್ಯರ ಮುಖಗಳಂತೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ವಿುಡಿತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು; ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಏನೋ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಿಡತೆಗಳು ಯುದ್ಧಕ್ಕೆ ಸಿದ್ಧಪಡಿಸಿದ ಕುದುರೆಗಳಂತೆ ಕಾಣುತ್ತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಎನೋ ಇದ್ದವು; ಅವುಗಳ ಮುಖಗಳು ಮಾನವರ ಮುಖಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ಮಿಡತೆಗಳು ಯುದ್ಧಕ್ಕೆ ಸನ್ನದ್ಧವಾದ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದಂತಿರುವ ಕಿರೀಟಗಳಿದ್ದವು. ಅವುಗಳ ಮುಖವು ಮಾನವರ ಮುಖಗಳಂತೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಿ ಠೊಳಾ ಮಾರಾಮಾರಿಕ್ ತಯಾರ್ ಹೊಲ್ಲ್ಯಾ ಘೊಡ್ಕ್ಯಾಂಚ್ಯಾ ಸರ್ಕಿ ದಿಸಿತ್; ತೆಂಚ್ಯಾ ಟಕ್ಲ್ಯಾ ವೈನಿ ಸೊನ್ಯಾಚ್ಯಾ ಮುಕುಟಾಚ್ಯಾ ಸರ್ಕೆ ಕಾಯ್ಕಿ ಹೊತ್ತೆ, ಅನಿ ತೆಂಚಿ ತೊಂಡಾ ಮಾನ್ಸಾಂಚ್ಯಾ ತೊಡಾಂಚ್ಯಾ ಸರ್ಕೆ ದಿಸಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:7
6 ತಿಳಿವುಗಳ ಹೋಲಿಕೆ  

ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ.


ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.


ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.


ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು