Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ತ್ರೀಯರ ಕೂದಲಿನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತಲೆಕೂದಲು ಸ್ತ್ರೀಯರ ತಲೆಕೂದಲಂತಿತ್ತು; ಹಲ್ಲುಗಳು ಸಿಂಹಗಳ ಹಲ್ಲುಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವುಗಳ ಕೂದಲು ಸ್ತ್ರೀಯರ ಕೂದಲಿನಂತಿದ್ದು, ಅವುಗಳಿಗೆ ಸಿಂಹಗಳಿಗಿದ್ದಂತೆ ಹಲ್ಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆಂಚಿ ಕೆಸಾ ಬಾಯ್ಕಾಮನ್ಸಾಂಚ್ಯಾ ಕೆಸಾಂಚ್ಯಾ ಸರ್ಕಿ ಹೊತ್ತಿ, ತೆಂಚಿ ದಾತಾ ಸಿವಾಂಚ್ಯಾ ದಾತಾಂಚ್ಯಾ ಸರ್ಕಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:8
8 ತಿಳಿವುಗಳ ಹೋಲಿಕೆ  

ನನ್ನ ದೇಶದ ಮೇಲೆ ಬಲಿಷ್ಠವಾದ ಹಾಗೂ ಅಸಂಖ್ಯಾತವಾದ ಒಂದು ಜನಾಂಗವು ಏರಿ ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ; ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ.


ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ


ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.


ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.


ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.


“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು