Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:1
38 ತಿಳಿವುಗಳ ಹೋಲಿಕೆ  

ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.


ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.


ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.


ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.


ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.


ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!


ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!


ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.


ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.


ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.


ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.


ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’” ಎಂದುಕೊಳ್ಳುವಿ.


ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


“ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.


ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.


“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು