ಪ್ರಲಾಪಗಳು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ. ಅಧ್ಯಾಯವನ್ನು ನೋಡಿ |