ಪ್ರಲಾಪಗಳು 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು ಮೇಲಣಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳಲ್ಲಿ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಮೇಲಿನಿಂದ ಬೆಂಕಿಯನ್ನು ಕಳಿಸಿದ್ದಾನೆ. ಆ ಬೆಂಕಿ ನನ್ನ ಎಲುಬುಗಳ ಆಳಕ್ಕೆ ಇಳಿದುಹೋಗಿದೆ. ಆತನು ನನ್ನ ಪಾದಗಳಿಗೆ ಬಲೆಯನ್ನು ಒಡ್ಡಿದ್ದಾನೆ. ಆತನು ನನ್ನನ್ನು ಸುತ್ತಲು ತಿರುಗಿಸಿದ್ದಾನೆ. ಆತನು ನನ್ನನ್ನು ಹಾಳುಭೂಮಿಯನ್ನಾಗಿ ಮಾಡಿದ್ದಾನೆ. ನಾನು ಸದಾ ಬಳಲುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |