Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಚೀಯೋನು ತನ್ನ ಕೈಗಳನ್ನು ಚಾಚಿದಳು. ಅವಳನ್ನು ಸಂತೈಸುವವರೇ ಇರಲಿಲ್ಲ. ಯಾಕೋಬನಿಗೆ ವೈರಿಗಳಾಗಬೇಕೆಂದು ಅವನ ನೆರೆಹೊರೆಯವರಿಗೆ ಯೆಹೋವನು ಆಜ್ಞಾಪಿಸಿದ್ದನು. ಜೆರುಸಲೇಮ್ ಒಂದು ಹೊಲಸು ವಸ್ತುವಾಗಿದ್ದಾಳೆ. ಆ ವೈರಿಗಳ ಮಧ್ಯದಲ್ಲಿ ಅವಳು ಒಂದು ಹೊಲಸು ವಸ್ತುವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:17
29 ತಿಳಿವುಗಳ ಹೋಲಿಕೆ  

ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.


ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.


ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.


“ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.


ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.


ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.


ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.


ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.


ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.


ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,


ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,


ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ.


ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.


ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು