Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:21
37 ತಿಳಿವುಗಳ ಹೋಲಿಕೆ  

ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.


ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ.


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ


ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.


ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.


“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.


“ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.


ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?


ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”


“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.


ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.


ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು