Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದವೆಂಬಾಕೆಯು ಘೋರ ಸೇವೆಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಫರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಹಿಂದಟ್ಟಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:3
22 ತಿಳಿವುಗಳ ಹೋಲಿಕೆ  

ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.


ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.


ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.


ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.


ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು