Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಭೋಗ್ಯ ವಸ್ತುಗಳನ್ನು ಜ್ಞಾಪಿಸಿಕೊಳ್ಳುತ್ತಾಳೆ; ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:7
23 ತಿಳಿವುಗಳ ಹೋಲಿಕೆ  

ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.


‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.


ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.


“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.


ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.


“ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!


ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.


ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.


‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು