ಪ್ರಲಾಪಗಳು 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ಕಿಸಿದು ಛೀಗುಟ್ಟಿ ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ ಇದು, ಬಂದೊದಗಿತು, ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿತೆರೆದಿದ್ದಾರೆ. “ನಾವು ಆಕೆಯನ್ನು ನುಂಗಿಬಿಟ್ಟೆವು. ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ. ಅದನ್ನು ನಾವು ಕಣ್ಣಾರೆ ಕಂಡಿದ್ದೇವೆ,” ಎಂದು ಅವರು ಕೊಚ್ಚಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |