ಪ್ರಲಾಪಗಳು 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ ರಾಜ್ಯವನ್ನೂ ಅಲ್ಲಿನ ಸರದಾರರನ್ನೂ ನೀಚಸ್ಥಿತಿಗೆ ತಂದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.