Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಿಯೋನ್ ನಗರಿಯ ಕೋಟೆಯನ್ನು ನಾಶಪಡಿಸಲೆಂದು ಎಳೆದಿರುವನಲ್ಲಾ ಸರ್ವೇಶ್ವರ ಅಳತೆನೂಲನ್ನು ! ಹಾಳುಮಾಡುವ ತನ್ನ ಕೈಯನ್ನು ಹಿಂದೆಗೆಯದೆ ಬಿರುಕುಗೊಳಿಸಿದ್ದಾನೆ ಪೌಳಿಗೋಡೆಯನ್ನೇ, ಕೋಟೆಯನ್ನೇ, ಅವುಗಳೆರಡೂ, ಕುಸಿದು ಬಿದ್ದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳುಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಚೀಯೋನ್ ಕುಮಾರಿಯ ಪೌಳಿಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ. ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತು ಮಾಡಿದ್ದಾನೆ. ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ. ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಕುಸಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಚೀಯೋನಿನ ಗೋಡೆಯನ್ನು ನಾಶಮಾಡಬೇಕೆಂದು ಉದ್ದೇಶಿಸಿದ್ದಾರೆ. ಅಳತೆಯ ಗೆರೆಯನ್ನು ಎಳೆದಿದ್ದಾರೆ. ತನ್ನ ಕೈಯನ್ನು ಕೆಡಿಸುವುದರಿಂದ ಹಿಂದೆಗೆಯಲಿಲ್ಲ. ಆದ್ದರಿಂದ ಕಲ್ಲಿನ ಪ್ರಾಕಾರವನ್ನು ಮತ್ತು ಗೋಡೆಯನ್ನು ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:8
17 ತಿಳಿವುಗಳ ಹೋಲಿಕೆ  

ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.


ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.


ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


“ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.


ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.


ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.


ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು