Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದಾನೆ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಶಾಂತಿಸಮಾಧಾನಕ್ಕೆ ನಾನು ದೂರವಾದೆ ಸುಖಸಂತೋಷವನ್ನು ಮರೆತುಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದೀ; ನಾನು ಸುಖವನ್ನು ಮರೆತುಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇನ್ನೆಂದಿಗೂ ಸಮಾಧಾನವೇ ಇರುವುದಿಲ್ಲವೆಂದುಕೊಂಡೆನು. ನಾನು ಸಂತೋಷವನ್ನು ಮರೆತುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ಪ್ರಾಣವನ್ನು ಸಮಾಧಾನದಿಂದ ದೂರ ಮಾಡಿದ್ದಾರೆ, ನಾನು ಸಮೃದ್ಧಿಯನ್ನು ಮರೆತುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:17
13 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.


ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!


ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.


ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.


ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.


ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು