Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯೂ ವ್ಯರ್ಥವಾಯಿತು” ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ಇಂತೆಂದುಕೊಂಡೆ: ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು ಸರ್ವೇಶ್ವರನಲ್ಲಿ ನಾನಿತ್ತ ನಿರೀಕ್ಷೆ ವ್ಯರ್ಥವಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಯ್ಯೋ, ನನ್ನ ಶಕ್ತಿಯು ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯು ವ್ಯರ್ಥ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಅಯ್ಯೋ, ನನ್ನ ಬಲವು ಮತ್ತು ನನ್ನ ನಿರೀಕ್ಷೆಯು ಯೆಹೋವ ದೇವರಿಂದ ನಾಶವಾದವು,” ಎಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:18
7 ತಿಳಿವುಗಳ ಹೋಲಿಕೆ  

ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು?


ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.


“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.


ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.


ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ?


ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.


ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು