Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾವು ಉಳಿದಿರುವದು ಯೆಹೋವನ ಕರುಣೆಯೇ; ಆತನ ಕೃಪಾವರಗಳು ನಿಂತುಹೋಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:22
20 ತಿಳಿವುಗಳ ಹೋಲಿಕೆ  

ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.


“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”


ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?


ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.


ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.


ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.


ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು