Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸವೆಸಿರುವನು ನನ್ನ ಮಾಂಸಚರ್ಮಗಳನ್ನು ಮುರಿದಿರುವನು ನನ್ನ ಎಲುಬುಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಚರ್ಮಮಾಂಸಗಳನ್ನು ಕಂದಿಸಿ ನನ್ನ ಎಲುಬುಗಳನ್ನು ಮುರಿದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನನ್ನ ಮಾಂಸವನ್ನು ಮತ್ತು ಚರ್ಮವನ್ನು ಕಂದಿಸಿದ್ದಾನೆ. ಆತನು ನನ್ನ ಮೂಳೆಗಳನ್ನು ಮುರಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಮಾಂಸ, ಚರ್ಮವನ್ನು ಆತನು ಹಳೆಯದನ್ನಾಗಿ ಮಾಡಿದ್ದಾರೆ. ಅವರು ನನ್ನ ಎಲುಬುಗಳನ್ನು ಮುರಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:4
10 ತಿಳಿವುಗಳ ಹೋಲಿಕೆ  

ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು