Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ನೀನು ನನ್ನ ಧ್ವನಿಯನ್ನು ಕೇಳಿದಿ; (ನನ್ನ ನಿಟ್ಟುಸುರಿಗೂ ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ನೀನು ನನ್ನ ಸ್ವರವನ್ನು ಕೇಳಿದೆ. ನೀನು ನಿನ್ನ ಕಿವಿಗಳನ್ನು ಮುಚ್ಚಿಕೊಳ್ಳಲಿಲ್ಲ; ನಿನ್ನನ್ನು ರಕ್ಷಿಸುವುದಿಲ್ಲ ಎಂದು ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ನೀನು ನನ್ನ ಸ್ವರವನ್ನು ಕೇಳಿದ್ದೀ. “ನನ್ನ ಶ್ವಾಸಕ್ಕೂ, ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:56
17 ತಿಳಿವುಗಳ ಹೋಲಿಕೆ  

ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು.


ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.


“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.


ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.


ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.


ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.


ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.


ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.


ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.


ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು