Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಹೊರಗಡೆ ಹೋಗದಂತೆ ಗೋಡೆಯೆಬ್ಬಿಸಿರುವನು, ಭಾರವಾದ ಬೇಡಿಗಳನ್ನು ನನಗೆ ತೊಡಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಆಚೆಹೋಗದಂತೆ ನನ್ನ ಸುತ್ತಲು ಗೋಡೆ ಕಟ್ಟಿ ನನಗೆ ಭಾರಿ ಬೇಡಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ. ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:7
11 ತಿಳಿವುಗಳ ಹೋಲಿಕೆ  

ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.


ದೇವರು ನನ್ನ ಸುತ್ತಲೂ ಬೇಲಿ ಹಾಕಿ, ದಾರಿಕಟ್ಟಿದ ಮೇಲೆ ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?


ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.


ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.


ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.


ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.


ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.


ನನ್ನ ದಾರಿಗಳಿಗೆ ಅಡ್ಡವಾಗಿ ಕೆತ್ತನೆಯ ಕಲ್ಲಿನ ಗೋಡೆಗಳನ್ನು ಹಾಕಿ, ಹಾದಿಗಳನ್ನು ಸುತ್ತುವರಿಯುವಂತೆ ಮಾಡಿದ್ದಾನೆ.


ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು